Monthly Archives: ಮಾರ್ಚ್, 2014
ಜಲಪಾತದಲ್ಲಿ ‘ಅಜ್ಜಿಗುಂಡಿ.ಕಾಮ್’!
ನಾವು ಈ ‘ಅಜ್ಜಿಗುಂಡಿ’ಯನ್ನು ತಲುಪಿದಾಗ ಇಳಿ ಸಂಜೆಯಾಗುತ್ತಿತ್ತು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಸುಮಾರು ಇಪ್ಪತ್ತೈದು ಕಿಲೋಮೀಟರ್ ದೂರದಲ್ಲಿದೆ ಈ ಅಜ್ಜಿಗುಂಡಿ ಫಾಲ್ಸ್. ನನ್ನೊಂದಿಗೆ ಕುಂ.ವೀರಭದ್ರಪ್ಪ, ಪ್ರಜಾವಾಣಿಯ ಸಂಪಾದಕರಾದ ಶಾಂತಕುಮಾರ್, ಡಿ.ಎಸ್.ಚೌಗಲೆ, ರವೀಂದ್ರಭಟ್ ಐನಕೈ ಹಾಗೂ ಡಿಎಂ ಹೆಗಡೆ ಇದ್ದರು. ನಾವು ಜಲಪಾತ ನೋಡಲು ಹೋದವರಲ್ಲ. ಆ ಜಲಪಾತದಲ್ಲಿ ನಡೆಯುವ ನಾಟಕ ನೋಡಲು ಹೋದವರು! ಆಶ್ಚರ್ಯ ಆಗುತ್ತಿದೆಯೇ? ಹೌದು, ನಾವು ನೋಡಲು ಹೋದದ್ದು ಜಲಪಾತದಲ್ಲಿ ನಡೆಯಲಿದ್ದ ‘ಅಜ್ಜಿಗುಂಡಿ.com’ ಎಂಬ ನಾಟಕವನ್ನು! ಮುಂಚೆಯೇ ಹೇಳಿದ್ದರು. ಇಲ್ಲಿ ಸ್ಟೇಜ್ ಇಲ್ಲ, ಕುರ್ಚಿ …
ಸಿಂಹನಿಗೆ ಸಿಂಹನೇ ಸಾಟಿ!
ಇಲ್ಲಿಗೆ ಸರಿಯಾಗಿ ಇಪ್ಪತ್ತೈದು ವರ್ಷಗಳ ಹಿಂದಿನ ಮಾತು. ಆಗ ನಾನು ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೆ. ಎಂಭತ್ತರ ದಶಕದ ಕೊನೆಯಲ್ಲಿ ಸಿ.ಆರ್.ಸಿಂಹ ಕುಮಾರ್ ಬಂಗಾರಪ್ಪ ಅಭಿನಯದ ‘ಅಶ್ವಮೇಧ’ ಚಲನಚಿತ್ರದ ನಿರ್ದೇಶನದಲ್ಲಿ ತೊಡಗಿದ್ದರು. ಸಿಂಹ ಕಮರ್ಷಿಯಲ್ ಚಿತ್ರ ಕೈಗೆತ್ತಿಕೊಂಡದ್ದು ನಮಗೆಲ್ಲ ಅಚ್ಚರಿಯುಂಟು ಮಾಡಿತ್ತು. ಹಾಗಾಗಿ ಅವರನ್ನು ಈ ಕುರಿತು ಮಾತನಾಡಿಸಲು ಅವರ ಜಯನಗರದ ಮೂರನೇ ಬ್ಲಾಕಿನ ಮನೆಗೆ ಹೋಗಿದ್ದೆ. ಇದು ನನ್ನ ಅವರ ಮೊದಲ ಭೇಟಿ. ನಾನು ಅವರನ್ನು ಕೇಳಿದ್ದ ಎರಡು ಪ್ರಶ್ನೆಗಳು ಇನ್ನೂ ನನ್ನ ನೆನಪಿನಲ್ಲಿವೆ. ನಿಮಗಿಟ್ಟಿರುವ ಈ …