Category Archives: Uncategorized
‘ಕ’ ‘ಮ’ ‘ಲ’ ‘ಮ್ಮ’ ನಾಲ್ಕೇ ಅಕ್ಷರಗಳು…
ಅಮ್ಮ, ಇದು ನಾನು, ನಿನ್ನ ಕೊನೇ ಮಗ! ಇದೆಂಥ ವಿಚಿತ್ರ ನೋಡು! ನನ್ನ ಐವತ್ತೆರಡನೇ ವಯಸ್ಸಿನಲ್ಲಿ; ನಿನ್ನ 85-86 ರ ಹರೆಯದಲ್ಲಿ; ನಾನು ನಿನಗೊಂದು ಕಾಗದ ಬರೀತಾ ಇದ್ದೀನಿ. ಇದು ನಾನು ನಿನಗೆ ಬರೆಯುತ್ತಿರುವ ಮೊದಲನೆಯ ಪತ್ರ!<a ಹೌದು, ನಾನು ನಿಂಗೆ ಯಾವತ್ತೂ ಕಾಗದ ಬರೆದೇ ಇಲ್ಲ. ಯಾಕೇಂದ್ರೆ, ನಿಂಗೇಂತ ಒಂದು ಅಡ್ರೆಸ್ಸೇ ಇರಲಿಲ್ಲ! ನೀನು ಹುಟ್ಟಿದ ಮನೇಲಿ ಯಾವುದೇ ಕಾಗದ-ಪತ್ರ ಬಂದ್ರೂ ಅದು ನಿಮ್ಮಪ್ಪನ ಹೆಸ್ರಿಗೆ ಬರತ್ತಿದ್ದವು. ಆಮೇಲೆ ಅರವತ್ತೆರಡು ವರ್ಷಗಳ ಹಿಂದೆ, ನೀನು ಮದ್ವೆಯಾಗಿ …
ಸರ್ಕಾರಕ್ಕೂಂದು ಮನವಿ…
ಗೆ, ಡಾ ಎನ್.ನಾಗಾಂಬಿಕಾ ದೇವಿ, ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಮಾನ್ಯರೆ, ಕಳೆದ ಶನಿವಾರ ಮೈಸೂರಿನಲ್ಲಿ 2012 ಮತ್ತು 2013 ರ ಸಾಲಿನ ರಾಜ್ಯಪ್ರಶಸ್ತಿ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿದ ನಿಮಗೆ ಅಭಿನಂದನೆಗಳು. ಹಾಗೆಯೇ ಈ ಸಮಾರಂಭದ ಕುರಿತು ನನ್ನ ಕೆಲವು ಅನಿಸಿಕೆಗಳನ್ನು ಹೇಳಲೇಬೇಕಾಗಿ ಬಂದದ್ದರಿಂದ ಈ ಪತ್ರ ಬರೆಯುತ್ತಿದ್ದೇನೆ. ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಅದರದ್ದೇ ಆದ ಘನತೆ, ಗೌರವ ಇದೆ. ತಮ್ಮ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ಗೌರವಕ್ಕೆ ಪಾತ್ರರಾಗಬೇಕೆಂದು ಚಲನಚಿತ್ರದ ಕಲಾವಿದರು, …
ಕಥೆ ಹುಟ್ಟಿದ ಸಮಯ…
ನಿಮಗೆ ಗೊತ್ತಿರಬೇಕಲ್ಲವೇ? ನಾನೀಗ ನನ್ನ ಒಂಬತ್ತನೇ ಸಿನಿಮಾ ಮಾಡಲು ಹೊರಟಿದ್ದೇನೆ. ಮತ್ತೊಂದು ಸಾಹಸದ ಅಧ್ಯಾಯ ಪ್ರಾರಂಭ! ‘ವಿದಾಯ’ ಅಂತ ಸಿನಿಮಾದ ಹೆಸರು. ಈ ಸಿನಿಮಾದ ನಿಜವಾದ ಎಳೆ ಹುಟ್ಟಿದ್ದು ಒಂಬತ್ತು ವರ್ಷಗಳ ಹಿಂದೆ. ಆಗ ನಮ್ಮ ತಂದೆ ಆಸ್ಪತ್ರೆಯಲ್ಲಿದ್ದರು. ಅವರಿಗೆ ಪಾರ್ಕಿನ್‌ಸನ್ ಎಂಬ ವಿದೇಶಿ ಹೆಸರಿನ ಕಾಯಿಲೆ ಬಂದಿತ್ತು. ಇದು ನರಮಂಡಲಕ್ಕೆ ಸಂಬಂಧಿಸಿದ ರೋಗ. ಜೊತೆಗೆ ಹೈ ಡಯಾಬಿಟಿಕ್ ಬೇರೆ. ಸುಮಾರು ಮೂವತ್ತೇಳು ವರ್ಷ ಮಕ್ಕಳಿಗೆ ಪಾಠ ಮಾಡಿದ್ದ ಮೇಷ್ಟ್ರು ಅವರು. ಮಾತಾಡಿ ಮಾತಾಡಿ ಧ್ವನಿ ಗಟ್ಟಿಯಾಗಿತ್ತು. …
ಕುಚೇಲನ ಮನೆಗೆ ಕೃಷ್ಣ ಬಂದ…
ಈಗ ನೋಡಿದರೆ ಇದೆಲ್ಲ ಒಂದು ಅಚ್ಚರಿ ಅಂದೆನ್ನಿಸುತ್ತದೆ! ಅದು ಕಳೆದ ವರ್ಷದ ಜನವರಿ ತಿಂಗಳು. ಎಂದಿನಂತೆ ಆ ಮುಂಜಾನೆ ದಿನಪತ್ರಿಕೆಯನ್ನು ತೆರೆದಾಗ ಮೊದಲ ಪುಟದಲ್ಲೇ ಒಂದು ಸುದ್ದಿ ಗಮನಸೆಳೆಯಿತು. ಅದರ ಶೀರ್ಷಿಕೆ ಹೀಗಿತ್ತು: “ಗ್ರಾಮವಾಸ್ತವ್ಯದಿಂದ ‘ವಾಸ್ತವ್ಯ’ವನ್ನೇ ಕಳೆದುಕೊಂಡವರು!ಹ್” ಈ ಮೂರೂವರೆ ಪದಗಳು ನನ್ನ ಈವತ್ತಿನ ‘ಡಿಸೆಂಬರ್-1’ ಚಲನಚಿತ್ರಕ್ಕೆ ನಾಂದಿ ಹಾಡಿದವು!ಪತ್ರಿಕೆಯ ಆ ವರದಿಯಲ್ಲಿ ಉತ್ತರಕರ್ನಾಟಕದ ಪುಟ್ಟ ಹಳ್ಳಿಯೊಂದರಲ್ಲಿ ಒಂದು ಬಡ ಕುಟುಂಬ ತಾನು ಬದುಕಿ ಬಾಳಿದ ಊರನ್ನೇ ಹೇಗೆ ತೊರೆದು ಹೋಗಬೇಕಾಯಿತು ಎನ್ನುವುದರ ಬಗ್ಗೆ ಬರೆಯಲಾಗಿತ್ತು. ತತ್ತ್‌ಕ್ಷಣ …
ಎಂಥಾ ಭಾಗ್ಯವಂತ!
ಡಾ.ರಾಜ್‌ಕುಮಾರ್ ನಮ್ಮಿಂದ ಭೌತಿಕವಾಗಿ ದೂರಾಗಿ ಎಂಟು ವರ್ಷಗಳೇ ಕಳೆದಿವೆ. ಆದರೆ ಅವರು ಮಾನಸಿಕವಾಗಿ ಕೋಟ್ಯಾಂತರ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ನಾನು ಪ್ರತ್ಯೇಕ ಹೇಳಬೇಕಾಗಿಲ್ಲ. ಒಂದು ಸಮೀಕ್ಷೆಯ ಪ್ರಕಾರ, ಅವರ ಕುರಿತ ಒಂದು ಕಾರ್ಯಕ್ರಮವೋ, ಅವರು ಅಭಿನಯಿಸಿದ ಒಂದಲ್ಲ ಒಂದು ಚಲನಚಿತ್ರವೋ, ಕರ್ನಾಟಕದ ಒಂದಲ್ಲ ಒಂದು ಕಡೆ, ಚಿತ್ರಮಂದಿರದಲ್ಲೋ ಅಥವಾ ಟೀವಿಯಲ್ಲೋ, ಪ್ರತಿ ಕ್ಷಣ ಪ್ರದರ್ಶನವಾಗುತ್ತಿರುತ್ತದೆ! ಈ ಭಾಗ್ಯ ಎಷ್ಟು ಜನಕ್ಕೆ ಸಿಗುತ್ತದೆ? ಇಪ್ಪತ್ತೆರಡು ವರ್ಷಗಳ ಹಿಂದೆ ಅವರ ಅಭಿನಯದ ‘ಆಕಸ್ಮಿಕ’ ಚಲನಚಿತ್ರಕ್ಕೆ ಸಹನಿರ್ದೇಶಕನಾಗಿ ಕೆಲಸ …
ಒಂದು ಪ್ರಶ್ನೆ ಪತ್ರಿಕೆ!
1. ‘ಡಿಸೆಂಬರ್ 1’ ರ ಸ್ಥೂಲ ಕಥಾ ನಕ್ಷೆ? ಅದೊಂದು ಉತ್ತರಕರ್ನಾಟಕದ ಒಂದು ಪುಟ್ಟ ಹಳ್ಳಿ. ಅಲ್ಲಿ ರೊಟ್ಟಿ ಮಾರಿ ಜೀವನ ಸಾಗಿಸುತ್ತಿರುವ ದೇವಕ್ಕನದ್ದು ಒಂದು ಪುಟ್ಟ ಕುಟುಂಬ. ಗಂಡ ಮಾದೇವಪ್ಪ ಟ್ರಕ್ ಓಡಿಸುತ್ತಾ ಸೀಮೆ ಸುತ್ತುತ್ತಿದ್ದವನು, ಅಪಘಾತದಲ್ಲಿ ಕಾಲು ಊನ ಮಾಡಿಕೊಂಡು ಈಗ ಹಿಟ್ಟಿನ ಗಿರಣಿಯಲ್ಲಿ ಚಿಕ್ಕಾಸಿಗೆ ದುಡಿಯುತ್ತಿದ್ದಾನೆ. ಗ್ರಾಮವಾಸ್ತವ್ಯದ ಹಿನ್ನೆಲೆಯಲ್ಲಿ ಡಿಸೆಂಬರ್ ಒಂದರಂದು ರಾಜ್ಯದ ಮುಖ್ಯಮಂತ್ರಿಗಳು ಆ ಮನೆಯಲ್ಲಿ ತಂಗುವ ನಿರ್ಧಾರ ಮಾಡುತ್ತಾರೆ. ದಿಢೀರನೆ ಮಾದೇವಪ್ಪ ದಂಪತಿಗಳಿಗೆ ಎಲ್ಲಿಲ್ಲದ ಪ್ರಾಮುಖ್ಯತೆ ಬರುತ್ತದೆ. ದೇವಕ್ಕನ ರೊಟ್ಟಿಗೆ …
ಜಲಪಾತದಲ್ಲಿ ‘ಅಜ್ಜಿಗುಂಡಿ.ಕಾಮ್’!
ನಾವು ಈ ‘ಅಜ್ಜಿಗುಂಡಿ’ಯನ್ನು ತಲುಪಿದಾಗ ಇಳಿ ಸಂಜೆಯಾಗುತ್ತಿತ್ತು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಸುಮಾರು ಇಪ್ಪತ್ತೈದು ಕಿಲೋಮೀಟರ್ ದೂರದಲ್ಲಿದೆ ಈ ಅಜ್ಜಿಗುಂಡಿ ಫಾಲ್ಸ್. ನನ್ನೊಂದಿಗೆ ಕುಂ.ವೀರಭದ್ರಪ್ಪ, ಪ್ರಜಾವಾಣಿಯ ಸಂಪಾದಕರಾದ ಶಾಂತಕುಮಾರ್, ಡಿ.ಎಸ್.ಚೌಗಲೆ, ರವೀಂದ್ರಭಟ್ ಐನಕೈ ಹಾಗೂ ಡಿಎಂ ಹೆಗಡೆ ಇದ್ದರು. ನಾವು ಜಲಪಾತ ನೋಡಲು ಹೋದವರಲ್ಲ. ಆ ಜಲಪಾತದಲ್ಲಿ ನಡೆಯುವ ನಾಟಕ ನೋಡಲು ಹೋದವರು! ಆಶ್ಚರ್ಯ ಆಗುತ್ತಿದೆಯೇ? ಹೌದು, ನಾವು ನೋಡಲು ಹೋದದ್ದು ಜಲಪಾತದಲ್ಲಿ ನಡೆಯಲಿದ್ದ ‘ಅಜ್ಜಿಗುಂಡಿ.com’ ಎಂಬ ನಾಟಕವನ್ನು! ಮುಂಚೆಯೇ ಹೇಳಿದ್ದರು. ಇಲ್ಲಿ ಸ್ಟೇಜ್ ಇಲ್ಲ, ಕುರ್ಚಿ …
ಸಿಂಹನಿಗೆ ಸಿಂಹನೇ ಸಾಟಿ!
ಇಲ್ಲಿಗೆ ಸರಿಯಾಗಿ ಇಪ್ಪತ್ತೈದು ವರ್ಷಗಳ ಹಿಂದಿನ ಮಾತು. ಆಗ ನಾನು ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೆ. ಎಂಭತ್ತರ ದಶಕದ ಕೊನೆಯಲ್ಲಿ ಸಿ.ಆರ್.ಸಿಂಹ ಕುಮಾರ್ ಬಂಗಾರಪ್ಪ ಅಭಿನಯದ ‘ಅಶ್ವಮೇಧ’ ಚಲನಚಿತ್ರದ ನಿರ್ದೇಶನದಲ್ಲಿ ತೊಡಗಿದ್ದರು. ಸಿಂಹ ಕಮರ್ಷಿಯಲ್ ಚಿತ್ರ ಕೈಗೆತ್ತಿಕೊಂಡದ್ದು ನಮಗೆಲ್ಲ ಅಚ್ಚರಿಯುಂಟು ಮಾಡಿತ್ತು. ಹಾಗಾಗಿ ಅವರನ್ನು ಈ ಕುರಿತು ಮಾತನಾಡಿಸಲು ಅವರ ಜಯನಗರದ ಮೂರನೇ ಬ್ಲಾಕಿನ ಮನೆಗೆ ಹೋಗಿದ್ದೆ. ಇದು ನನ್ನ ಅವರ ಮೊದಲ ಭೇಟಿ. ನಾನು ಅವರನ್ನು ಕೇಳಿದ್ದ ಎರಡು ಪ್ರಶ್ನೆಗಳು ಇನ್ನೂ ನನ್ನ ನೆನಪಿನಲ್ಲಿವೆ. ನಿಮಗಿಟ್ಟಿರುವ ಈ …
‘ತಿಮ್ಮರುಸು’ ಎಂಬ ಚತುರ ಮಂತ್ರಿ…
ವಿಜಯನಗರದ ಇತಿಹಾಸದಲ್ಲಿ ಶ್ರೀಕೃಷ್ಣದೇವರಾಯನ ಕಾಲದಲ್ಲಿದ್ದ ಮಹಾಮಂತ್ರಿ ತಿಮ್ಮರುಸುವಿಗೆ ವಿಶೇಷ ಸ್ಥಾನವಿದೆ. ಈತನ ಬದುಕೇ ಒಂದು ದುರಂತ ಪಯಣ. ತಿಮ್ಮರುಸು ‘ನಿಯೋಗಿ ತೆಲುಗು ಬ್ರಾಹ್ಮಣ’ ಪಂಗಡಕ್ಕೆ ಸೇರಿದವನು. ಕೃಷ್ಣದೇವರಾಯನಿಗೂ ಮುಂಚೆ ವಿಜಯನಗರ ಸಂಸ್ಥಾನವನ್ನು ವೀರನರಸಿಂಹರಾಯ ಆಳುತ್ತಿದ್ದನು. ಅವನ ಆಳ್ವಿಕೆಯಲ್ಲಿಯೇ ತಿಮ್ಮರುಸು ಮಹಾಮಂತ್ರಿಯಾಗಿದ್ದ. ಪೋರ್ಚಗೀಸ್ ಪ್ರವಾಸಿಗ ಫೆರ್ನಾವ್ ನುನಿಜ್ (Fernao Nuniz) ಬರೆದಿರುವ ಪ್ರಕಾರ, ವೀರನರಸಿಂಹರಾಯನಿಗೆ ಮರಣ ಸನ್ನಿಹಿತವಾದ ಸಂದರ್ಭ. ಮರಣಶಯ್ಯೆಯಲ್ಲಿದ್ದ ದೊರೆಗೆ ತನ್ನ ನಂತರ ವಿಜಯನಗರದ ಸಿಂಹಾಸನ ಯಾರ ಪಾಲಾಗುತ್ತದೋ ಎಂಬ ಚಿಂತೆ ಕಾಡುತ್ತಿದೆ. ಆಗ ಸಿಂಹಾಸನವೇರಲು ಮುಂಚೂಣಿಯಲ್ಲಿದ್ದ …
ಕ್ಯಾಮರಾ ಹಿಂದಿನ ಕ್ರಾಂತಿಕಾರಿ
ಮೇ 30, ಬೆಳಗ್ಗೆ. ನ್ಯೂಸ್‌ಚಾನಲ್‌ನ ಮಿತ್ರರೊಬ್ಬರು ಫೋನ್ ಮಾಡಿ, ಹನ್ನೊಂದು ಗಂಟೆಯ ನ್ಯೂಸ್‌ಗೆ ನಿಮ್ಮದೊಂದು ಬೈಟ್(ಪ್ರತಿಕ್ರಿಯೆ) ಬೇಕಿತ್ತು, ಫೋನ್ ಮಾಡ್ತೀವಿ, ಸಿದ್ಧವಿರುವಿರಾ? ಎಂದು ಕೇಳಿದರು. ‘ಯಾವ ವಿಷಯದ ಕುರಿತಾಗಿ?’ ಎಂದು ಕೇಳಿದೆ. ‘ರಿತುಪರ್ಣೋ ಘೋಷ್ ಹೋಗಿಬಿಟ್ಟರಲ್ಲ, ಯಾಕೆ ನಿಮಗೆ ಗೊತ್ತಿಲ್ಲವೇ?’ ಎಂದಾಗ ನನ್ನ ಮನದ ತಲ್ಲಣವನ್ನು ನೀವೇ ಊಹಿಸಿಕೊಳ್ಳಿ… ಛೇ ಛೆ! ಹೀಗಾಗಬಾರದಿತ್ತು. ನಲವತ್ತೊಂಬತ್ತು ಸಾಯುವ ವಯಸ್ಸೆ? ಹಾಗೆ ನೋಡಿದರೆ ನನಗೂ ಈಗ ನಲವತ್ತೊಂಬತ್ತು. ನನಗಿಂತ ರಿತುಪರ್ಣರು ಕೇವಲ ಮೂರು ತಿಂಗಳು ದೊಡ್ಡವರು ಅಷ್ಟೇ! ನಮ್ಮದೇ …